ಮಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಕೊರೊನಾಗೂ ಇನ್ನು ಮುಂದೆ ಚಿಕಿತ್ಸೆ ಸಿಗಲಿದೆ.
ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಪ್ರಕಟನೆ ಹೊರಡಿಸಿದ್ದು, ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಇನ್ನು ಮುಂದೆ ಕೊರೊನಾಗೂ ಚಿಕಿತ್ಸೆ ಸಿಗಲಿದೆ. ಬಿಪಿಎಲ್ ಕಾರ್ಡ್ ಹೊಂದಿದವರಿಗೆ ವಾರ್ಷಿಕ 5 ಲಕ್ಷ ರೂಪಾಯಿ ತನಕ ಉಚಿತ ಚಿಕಿತ್ಸೆ ದೊರೆಯಲಿದೆ. ಎಪಿಎಲ್ ಕಾರ್ಡ್ ಹೊಂದಿದವರಿಗೆ ಶೇ. ೩೦ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿರಲಿದೆ. ಎಪಿಎಲ್ ಕಾರ್ಡ್ ಹೊಂದಿದವರಿಗೆ ಪಾವತಿ ಆಧಾರದ ಮೇಲೆ ಸರಕಾರಿ ಪ್ಯಾಕೇಜ್ ಶೇ. 30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ 1.50 ಲಕ್ಷ ರೂಪಾಯಿ ಇರುತ್ತದೆ.
ದ.ಕ. ಜಿಲ್ಲೆಯಲ್ಲಿ 240 ಸಾಮಾನ್ಯ ಸೇವಾ ಕೇಂದ್ರಗಳಿವೆ. ಆ ಕೇಂದ್ರಗಳ ಮೂಲಕ ಸಾರ್ವಜನಿಕರು ಹೊಸ ನೋಂದಣಿ ಮಾಡಿಸಬಹುದಾಗಿದೆ. ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಕೇಂದ್ರಕ್ಕೆ ತೆರಳಿ ಕಾರ್ಡ್ ಮಾಡಿಸಬಹುದಾಗಿದೆ. ಕಾರ್ಡ್ ಮಾಡಿಸಲು ತೆರಳುವ ವೇಳೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಅಗತ್ಯವಾಗಿದೆ. ಇನ್ನು ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಜರುಪಡಿಸಿ ಕೂಡ ಚಿಕಿತ್ಸೆ ಪಡೆಯಬಹುದಾಗಿದೆ.
ಸೌಲಭ್ಯ, ಹೆಚ್ಚಿನ ಮಾಹಿತಿ ಪಡೆಯಲು ಹತ್ತಿರದ ಸರಕಾರ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು, ಆರೋಗ್ಯ ಸಹಾಯವಾಣಿ 104 ಸಂಪರ್ಕಿಸಬೇಕಾಗಿದೆ.
Follow us on Social media