ಮಂಗಳೂರು : ಉಸಿರಾಟದ ತೊಂದರೆಯಿಂದ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ 45 ವರ್ಷದ ಮಹಿಳೆ ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಅಲ್ಲಿಂದ ವೆನ್ಲಾಕ್‌ನಲ್ಲಿರುವ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು.
ಗಂಟಲ ದ್ರವದ ಮಾದರಿಯನ್ನು ಶನಿವಾರವೇ ಪರೀಕ್ಷೆಗೆ ಕಳುಹಿಸಲಾಗಿದ್ದು ಭಾನುವಾರ ಬೆಳಿಗ್ಗೆ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ. ಇನ್ನು ಸ್ಯಾಂಪಲ್ ಟೆಸ್ಟ್ ವರದಿ ಬಂದ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು ಎಂದು ತಿಳಿದು ಬಂದಿದೆ.
Follow us on Social media