ಮಂಗಳೂರು : ನೂತನ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಶುಕ್ರವಾರ ಮಹಾನಗರಪಾಲಿಕೆ ವ್ಯಾಪ್ತಿಯ ಕಂಟೈನ್‍ಮೆಂಟ್ ವಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳಾದೇವಿ ಪರಿಸರದ ಕಂಟೈನ್‍ಮೆಂಟ್ ವಲಯಕ್ಕೆ ಭೇಟಿ ನೀಡಿದ ಅವರು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿ ಸೂಚನೆಗಳನ್ನು ನೀಡಿದರು.ಸ್ಥಳೀಯ ಮಟ್ಟದ ಅಧಿಕಾರಿಗಳು ಕಂಟೈನ್‍ಮೆಂಟ್ ವಲಯದಲ್ಲಿ ನಿಗಾ ಇಡುತ್ತಿರುವ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ನಗರಪಾಲಿಕೆ ಪ್ರಭಾರ ಆಯುಕ್ತ ದಿನೇಶ್ ಕುಮಾರ್, ಉಪವಿಭಾಗಾಧಿಕಾರಿ ಮದನ್ ಮೋಹನ್, ತಹಶೀಲ್ದಾರ್ ಗುರುಪ್ರಸಾದ್ ಮತ್ತಿತರರು ಇದ್ದರು.
Follow us on Social media