ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ರಶ್ಮಿತಾ (18) ಮೃತ ಯುವತಿ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಈಕೆ, ಕೆಲ ದಿನಗಳಿಂದ ಅನಾರೋಗ್ಯ ಪೀಡಿತಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ. ಆರೋಗ್ಯವಾಗಿದ್ದ ರಶ್ಮಿತಾ ಗುರುವಾರ ರಾತ್ರಿ ಹಠಾತ್ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.
ರಶ್ಮಿತಾ ಸಾವಿನ ಹಿನ್ನೆಲೆಯಲ್ಲಿ ಕಾಲೇಜಿನ ರಶ್ಮಿತಾ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿತ್ತು.
Follow us on Social media