ಮಂಗಳೂರು: ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳ್ಳಾಲದ 60 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಈ ಮೂಲಕ ಕೊರೋನಾಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ.
ಉಳ್ಳಾಲ ನಿವಾಸಿ ವೃದ್ಧೆ ಕೆಲವು ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಆಕೆಯನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ.