ಮಂಗಳೂರು: ಖಾಸಗಿ ಆಸ್ಪತ್ರೆಗಳು ಕೊರೋನಾ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಸೋಮವಾರ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಕೊರೋನಾ ರೋಗಿಗಳ ನಿರ್ವಹಣೆ ಕುರಿತು ಅವರು ಸಭೆ ನಡೆಸಿ, ಮಾಹಿತಿ ನೀಡಿದರು.
ಯಾವುದೇ ಕಾರಣಕ್ಕೂ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡದೆ ಅಲೆದಾಡಿಸಬಾರದು. ಇದನ್ನು ಸರ್ಕಾರ ಸಹಿಸಲ್ಲ, ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲೇಬೇಕು ಎಂದು ಅವರು ಸ್ಪಷ್ಟಪಡಿಸಿದರು.
ರೋಗಿಗಳ ಆರ್ಥಿಕ ಸಾಮರ್ಥ್ಯವನ್ನು ಪರಿಗಣಿಸದೆ, ಬಿಪಿಎಲ್ ಮತ್ತು ಎಪಿಎಲ್ ಸಹಿತ ಪ್ರತಿಯೊಬ್ಬರಿಗೂ ಆಯುಷ್ಮಾನ್ ಯೋಜನೆಯೊಂದಿಗೆ ಸರಿಹೊಂದಿಸಿ, ಸರ್ಕಾರ ನಿಗದಿ ಮಾಡಿರುವಂತಹ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಪೂಜಾರಿ ಹೇಳಿದರು.
Follow us on Social media