Breaking News

ಮಂಗಳೂರು: ಗುರುವಾರದಿಂದ 1 ವಾರ ದ.ಕ. ಜಿಲ್ಲೆ ಲಾಕ್ ಡೌನ್!

ಮಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಒಂದು ವಾರ ಲಾಕ್ ಡೌನ್ ಜಾರಿಯಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಇಂದು ನಡೆದ ಸಿಎಂ ಮತ್ತು ಜಿಲ್ಲಾಧಿಕಾರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಗುರುವಾರದಿಂದ 7 ದಿನಗಳ ಕಾಲ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಿರಲಿದ್ದು ಈ ಕುರಿತ ಮಾರ್ಗಸೂಚಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.

ಬುಧವಾರದವರೆಗೆ ಜನರಿಗೆ ಖರೀದಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಕೋಟ ಹೇಳಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×