Breaking News

ಮಂಗಳೂರು: ಗುರುವಾರ ಬೆಳಗ್ಗಿನಿಂದ ಲಾಕ್ ಡೌನ್ ತೆರವು-ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 5 ಗಂಟೆಯ ತನಕ ಮಾತ್ರ ಲಾಕ್ ಡೌನ್ ಇರಲಿದೆ. ಬಳಿಕ ಜಿಲ್ಲೆಯಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ದ.ಕ. ಜಿಲ್ಲೆಯಲ್ಲಿ ಈಗಾಗಲೇ ಲಾಕ್ ಡಾನ್ ಜಾರಿಯಲ್ಲಿದ್ದು, ಜುಲೈ 22ರ ಬುಧವಾರ ಸಂಜೆ ಲಾಕ್ ಡೌನ್ ಅವಧಿ ಮುಗಿಯಲಿದೆ. ಈ ಹಿಲ್ಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜತೆ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಚರ್ಚೆ ನಡೆಸಿದ್ದೇನೆ. ಮುಖ್ಯಮಂತ್ರಿಗಳು ಲಾಕ್ ಡೌನ್ ಮುಂದುವರೆಸದಂತೆ ಸೂಚನೆ ನೀಡಿದ್ದಾರೆ. ಅವರ ಸಲಹೆಯಂತೆ ಲಾಕ್ ಡೌನ್ ಮುಂದುವರೆಸದಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಈ ಬಗ್ಗೆ ಅಧಿಕೃತ ಆದೇಶವನ್ನು ಜಿಲ್ಲಾಧಿಕಾರಿಗಳು ಹೊರಡಿಸಲಿದ್ದು, ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×