ಮಂಗಳೂರು : ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟ ಬಂಟ್ವಳದ ಕಸ್ಬಾ ನಿವಾಸಿಯಾಗಿರುವ ಮಹಿಳೆಯ ದೂರದ ಸಂಬಂಧಿಯಾಗಿರುವ , ದ.ಕ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೂ ಮಹಿಳೆ ದಾಖಲಾಗಿದ್ದ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸಿದ್ದರು ಎಂಬ ಕಾರಣಕ್ಕೆ ಸಿಬ್ಬಂದಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.
ಆ ಸಿಬ್ಬಂದಿಯೂ ಏ.18 ರಂದು ವೆನ್ಲಾಕ್ ಆಸ್ಪತ್ರೆಗೆ ತೆರಳಿ ಮೃತ ಮಹಿಳೆಯ ಪುತ್ರನನ್ನು ಭೇಟಿ ಮಾಡಿ ಆಕೆಯ ಯೋಗಕ್ಷೇಮ ವಿಚಾರಿಸಿದ್ದಾರೆ ಎನ್ನಲಾಗಿದೆ ಈ ಕಾರಣಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಇದೀಗ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯನ್ನು ಕ್ವಾರೆಂಟೈನ್ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅವರು ನಮ್ಮ ಕಚೇರಿಯಲ್ಲಿ ಕೆಲಸ ಮಾಡುವ ಸಿಬಂದಿಯೊಬ್ಬರು ವೆನ್ಲಾಕ್ ಆಸ್ಪತ್ರೆಗೆ ಭೆಟೀ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
Follow us on Social media