Breaking News

ಮಂಗಳೂರು: ಜೂ. 18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ- ವಿದ್ಯಾರ್ಥಿಗಳಿಗೆ ಸಹಾಯವಾಣಿ

ಮಂಗಳೂರು : ಕೊರೊನಾ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂನ್ ೧೮ರಂದು ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲ ಪರಿಹರಿಸಿಕೊಳ್ಳಲು ಸಹಾಯವಾಣಿಯನ್ನು ಆರಂಭಿಸಲಾಗಿದೆ.

ಪರೀಕ್ಷೆ ನಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಹತ್ತು ಹಲವು ಗೊಂದಲಗಳಿವೆ. ಈ ಗೊಂದಲ ಬಗೆ ಹರಿಸಲೆಂದೇ ಸಹಾಯವಾಣಿ ಸ್ಥಾಪಿಸಲಾಗಿದೆ. ಈ ಸಹಾಯವಾಣಿ ಮೂಲಕ್ ವಿದ್ಯಾರ್ಥಿಗಳು ಕರೆ ಮಾಡಿ ಸಮಸ್ಯೆ, ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳು ಯಾವುದೇ ನೆರವು ಬೇಕಿದ್ದಲ್ಲಿ ಅಥವಾ ಸಂಶಯಗಳಿದ್ದರೆ, ದೂರವಾಣಿ ಸಂಖ್ಯೆ 0824-2453787 ಇದಕ್ಕೆ ( ಬೆಳಿಗ್ಗೆ 10 ರಿಂದ ಸಂಜೆ 6 ರೊಳಗೆ) ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×