ಮಂಗಳೂರು:ದಿನದಿಂದ ದಿನಕ್ಕೆ ಗಗನಕ್ಕೆರುತ್ತಿರುವ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಮಂಗಳೂರು ಪುರಭವನ ಮುಂದೆ ನಡೆಯಿತು.
ನಗರದ ಜ್ಯೋತಿ ವೃತ್ತದಿಂದ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೈಕಲ್ ರ್ಯಾಲಿ ನಡೆಸಿ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಇದೇ ವೇಳೆ ಬೆಲೆ ಏರಿಕೆ ವಿರೋಧಿಸಿ ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ್ ಕಾಮತ್ ಅವರ ಮುಖವಾಡ ಧರಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಹರೀಶ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗಿಯಾಗಿ ಕೇಂದ್ರ ಸರಕಾರದ ವಿರುದ್ಧ ಅಕ್ರೋಶವನ್ನು ವ್ಯಕ್ತಪಡಿಸಿದರು.
Follow us on Social media