ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜುಲೈ 1ರ ಶುಕ್ರವಾರ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಆದೇಶಿಸಿದ್ದಾರೆ.
- ಭಾರತೀಯ ಹವಾಮಾನ ಇಲಾಖೆಯು ಶುಕ್ರವಾರದ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಆದರೆ ನಾಳೆಯೂ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರ, ಶಾಲೆ-ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಜಿಲ್ಲಾಡಳಿತವು ರಜೆ ಘೋಷಣೆ ಮಾಡಿದೆ.ವಿಪರೀತ ಮಳೆ ಮತ್ತು ಜಿಲ್ಲೆಯ ವಿವಿಧೆಡೆ ಕೃತಕ ನೆರೆ ಉಂಟಾದ ಹಿನ್ನೆಲೆಯಲ್ಲಿ ಗುರುವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು.