ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಇಂದು 83 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಮಧ್ಯಾಹ್ನ ಸೋಂಕು ಪೀಡಿತ ಮೂಡಬಿದ್ರೆ ನಿವಾಸಿ 52ರ ಹರೆಯದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಸೋಂಕಿಗೆ ಈವರೆಗೆ 26 ಮಂದಿ ಪ್ರಾಣ ಕಳೆದುಕೊಂಡಿದ್ದು 10 ಮಂದಿ ಐಸಿಯುನಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ.