Breaking News

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾನುವಾರ ಕೋವಿಡ್ ನಿಂದ ಮತ್ತಿಬ್ಬರು ಮೃತಪಟ್ಟಿದ್ದಾರೆ.

ಬಂಟ್ವಾಳ ತಾಲ್ಲೂಕಿನ 57 ವರ್ಷದ ಮಹಿಳೆ ಹಾಗೂ ಸುರತ್ಕಲ್ ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೋವಿಡ್-19 ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

ಸೋಂಕು ದೃಢಪಟ್ಟಿದ್ದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯುವಕ ಸರ್ಕಾರಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಇಬ್ಬರು ಮೃತಪಟ್ಟಿದ್ದಾರೆ.

ಇದರಿಂದಾಗಿ ಕೋವಿಡ್-19 ನಿಂದ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿದೆ. ಈ ಪೈಕಿ ಇಬ್ಬರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×