ಮಂಗಳೂರು : ದ.ಕದಲ್ಲಿ ಭಾನುವಾರ ಇಬ್ಬರು ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಬಲಿಯಾಗಿದ್ದು, ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಸುರತ್ಕಲ್ ಗ್ರಾಮದ ಜೋಕಟ್ಟೆ ನಿವಾಸಿ 51 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೃತಪಟ್ಟ ಮಹಿಳೆ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 26ರ ಸಂಜೆ ಸೋಂಕು ಪತ್ತೆಯಾಗಿತ್ತು.
ಭಾನುವಾರ ಬೆಳಗ್ಗೆ ಬಂಟ್ವಾಳ ಮೂಲದ 57 ವರ್ಷದ ವೃದ್ದೆ ಹಾಗೂ ಸುರತ್ಕಲ್‌ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದರು.
ಕೊರೊನಾ ಸೋಂಕು ದೃಢಪಟ್ಟಿದ್ದ ಮಹಿಳೆಯು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ ಯುವಕ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಇಬ್ಬರು ಕೂಡಾ ಮೃತಪಟ್ಟಿದ್ದಾರೆ.
Follow us on Social media