ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5311ಕ್ಕೆ ಏರಿಕೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ 2715 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2556 ಮಂದಿ ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಬುಧವಾರವೂ ಕೂಡ 118 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂದಿದ್ದಾರೆ.
65 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 12 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದ್ದು, 58 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
Follow us on Social media