ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 5713ಕ್ಕೆ ಏರಿಕೆಯಾಗಿದೆ.
ಶುಕ್ರವಾರದಂದು ಮತ್ತೆ 70 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ 2631 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 2929 ಮಂದಿ ಜಿಲ್ಲೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ 75 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 63 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 14 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. 52 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಮತ್ತೆ ಐವರು ಸೋಂಕಿಗೆ ಬಲಿ:
ಮಂಗಳೂರು ನಿವಾಸಿ ಸುಮಾರು 47 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಬಂಟ್ವಾಳದ 75 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರಿನ 63 ವರ್ಷದ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆಯ 88 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ನಿವಾಸಿ 75 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ.