ಮಂಗಳೂರು : ದ.ಕ. ಜಿಲ್ಲೆಯಲ್ಲಿ ದಿನದಿಂದ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮತ್ತೆ 163 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ರವಿವಾರದಂದು 45 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ರವಿವಾರ ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 3116 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6015ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯ ತನಕ 169 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 2730 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಇನ್ನು ಮಂಗಳೂರು ತಾಲೂಕಿನಲ್ಲಿ 107 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಂಟ್ವಾಳದಲ್ಲಿ 13, ಬೆಳ್ತಂಗಡಿಯಲ್ಲಿ 19, ಪುತ್ತೂರು ಹನ್ನೊಂದು, ಸುಳ್ಯ ತಾಲೂಕಿನಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಹೊರ ಜಿಲ್ಲೆಯ 9 ಹಾಗೂ ಹೊರ ರಾಜ್ಯದ ಮೂವರಲ್ಲಿ ರವಿವಾರದಂದು ಸೋಂಕು ಪತ್ತೆಯಾಗಿದೆ.
Follow us on Social media