Breaking News

ಮಂಗಳೂರು: ದ.ಕ. ಜಿಲ್ಲೆಯಲ್ಲಿ ರವಿವಾರ ಐವರು ಗುಣಮುಖ-113 ಮಂದಿಯ ವರದಿ ನೆಗೆಟಿವ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ರವಿವಾರ ಐವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

13 ವರ್ಷದ ಬಾಲಕಿ, 25 ವರ್ಷದ ಯುವಕ, 30 ವರ್ಷದ ವ್ಯಕ್ತಿ, 49 ವರ್ಷದ ವ್ಯಕ್ತಿ ಹಾಗೂ 54 ವರ್ಷದ ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 96 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ.

ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 182 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 89 ಮಂದಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಏಳು ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನು ರವಿವಾರದಂದು 151 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ.

ರವಿವಾರದಂದು 130 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು, ಈ ಪೈಕಿ 17 ಮಂದಿಯಲ್ಲಿ ಪಾಸಿಟಿವ್ ಕಂಡು ಬಂದಿದೆ. 113 ಮಂದಿಯ ವರದಿ ನೆಗೆಟಿವ್ ಆಗಿದೆ. ಈ ನಡುವೆ 21 ಮಂದಿಯ ಪರೀಕ್ಷಾ ವರದಿ ನಿರೀಕ್ಷಿಸಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×