ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಇಂದು 139 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ.
ಇನ್ನು ಶನಿವಾರ 6 ಕೊರೊನಾ ಸಾವುಗಳು ವರದಿಯಾಗಿದ್ದು ಜಿಲ್ಲೆಯಲ್ಲಿ ಈವರೆಗೆ 159 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಇಂದು 54 ಮಂದಿ ಗುಣಮುಖರಾಗಿದ್ದು ಈವರೆಗೆ 2685 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 3008 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ಮಂಗಳೂರಿನಲ್ಲಿ 91, ಬಂಟ್ವಾಳದಲ್ಲಿ 19, ಬೆಳ್ತಂಗಡಿಯಲ್ಲಿ 14, ಪುತ್ತೂರಿನಲ್ಲಿ 9, ಹಾಗೂ ಬೇರೆ ಜಿಲ್ಲೆಯ ಆರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Follow us on Social media