ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿದೆ.
- ಪಿಯುಸಿ, ಪದವಿ ಮತ್ತು ಇತರ ವೃತ್ತಿಪರ ಕಾಲೇಜುಗಳು ಎಂದಿನಂತೆ ಕಾರ್ಯಚರಿಸಲಿದೆ.ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳಿಗೆ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.