ಮಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.
ಎಂಟು ಕ್ಷೇತ್ರಗಳ ಪೈಕಿ ಐದು ಕಡೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಸಹೋದರ ಬಿಕೆ ಶಿವರಾಂ ಪುತ್ರ ರಕ್ಷಿತ್ ಶಿವರಾಂಗೆ ಬೆಳ್ತಂಗಡಿಯಲ್ಲಿ ಟಿಕೆಟ್ ನೀಡಲಾಗಿದೆ. ಸುಳ್ಯ ಮೀಸಲು ಕ್ಷೇತ್ರದಲ್ಲಿ ಕೃಷ್ಣಪ್ಪ ಜಿ ಘೋಷಿಸಲಾಗಿದೆ.ಕಳೆದ ಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಿಥುನ್ ರೈಗೆ ಮೂಡಬಿದಿರೆ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇನ್ನು ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ಮತ್ತು ಪುತ್ತೂರು ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ.
Follow us on Social media