Breaking News

ಮಂಗಳೂರು : ದ.ಕ. ‘ಲಾಕ್‌ಡೌನ್‌ ಮಾರ್ಗಸೂಚಿ ಬಿಡುಗಡೆ’ – ಇಲ್ಲಿದೆ ಸಂಪೂರ್ಣ ವಿವರ

ಮಂಗಳೂರು : ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಜು. 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ನೀಡಲಾಗಿರುವ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು , ಸಹಾಯಕ ಆಯುಕ್ತರು, ತಹಶೀಲ್ದಾರ್ ಗೆ ಆದೇಶಿಸಿದ್ದಾರೆ.

ಆಹಾರ ,ಹಾಗೂ ಹಣ್ಣು ತರಕಾರಿಗೆ ಖರೀದಿಗೆ ಬೆಳಗ್ಗೆ 8ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಅವಕಾಶ ನೀಡಲಾಗಿದ್ದು , ತುರ್ತು  ಸಂದರ್ಭದಲ್ಲಿ ಮತ್ತು ವೈದ್ಯಕೀಯ ತುರ್ತು ಸೇವೆಗಳ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದೆ


ಲಾಕ್ ಡೌನ್ ಮಾರ್ಗಸೂಚಿಗಳು ಇಂತಿವೆ:
* ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
* ಕಂಟೈನ್ ಮೆಂಟ್ ಅಲ್ಲದ ವಲಯಗಳಲ್ಲಿ ಸರ್ಕಾರಿ ಕಚೇರಿಗಳು, ಆರೋಗ್ಯ, ವಿದ್ಯುತ್ , ನೀರು, ವೈದ್ಯಕೀಯ ಶಿಕ್ಷಣ,ಪೊಲೀಸ್, ಸೇರಿದಂತೆ ತುರ್ತು ಸೇವೆಗಳಿಗೆ ನಿರ್ಬಂಧ ಇರುವುದಿಲ್ಲ.
* ಮಂಗಳೂರು ಮಹಾನಗರ ಪಾಲಿಕೆ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆ, ಹಾಗೂ ಜಿಲ್ಲಾಧಿಕಾರಿಗಳ ಮತ್ತು ಅಧೀನ ಕಚೇರಿಗಳು ಕಾರ್ಯನಿರ್ವಹಿಸಬಹುದಾಗಿದೆ.
* ನ್ಯಾಯಾಲಯ ಹಾಗೂ ನ್ಯಾಯಾಂಗ ಕೆಲಸಗಳಿಗೆ ಸಂಬಂಧಿಸಿ ಕಚೇರಿಗಳು – ಉಚ್ಚ ನ್ಯಾಯಾಲಯ ಹೊರಡಿಸಿರುವ ಮಾರ್ಗಸೂಚಿ ಅನ್ವಯ ಕಾರ್ಯ ನಿರ್ವಹಿಸತಕ್ಕದ್ದು
* ಕೋವಿಡ್ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಚೇರಿ ಅಧಿಕಾರಿ ಸಿಬ್ಬಂದಿಗಳು
* ಜಿಲ್ಲಾ ಖಜಾನೆ ಮತ್ತು ಅಧೀನ ಖಜಾನೆ ಕಾರ್ಯ ನಿರ್ವಹಿಸಬಹುದಾಗಿದೆ.

ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮ ಮುಂತಾದವುಗಳು ಮುಚ್ಚಿರತಕ್ಕದ್ದು
ವಿನಾಯಿತಿ
* ರಕ್ಷಣೆ, ಸಶಸ್ತ್ರ, ಪೊಲೀಸ್ ಪಡೆ, ದೂರ ಸಂಪರ್ಕ ಸೇವೆ ಸೇರಿ ಅಗತ್ಯ ಸೇವೆಗಳನ್ನು ನಿರ್ವಹಿಸುವ ಕಚೇರಿಗಳು ತೆರೆದಿರುತ್ತವೆ.
* ಅಂಚೆ ಕಚೇರಿಗಳು, ಬ್ಯಾಂಕ್ ಗಳು, ವೇತನ, ಲೆಕ್ಕಪತ್ರ, ಹಣಕಾಸು ಸಲಹೆಗಾರರು ಹಾಗೂ ಮಹಾ ಲೆಕ್ಕ ನಿಯಂತ್ರಕರ ಕಚೇರಿಗಳು ಕನಿಷ್ಠ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬೇಕಾಗುತ್ತದೆ.
* ಎಲ್ಲಾ ಆರೋಗ್ಯ ಸೇವೆಗಳು ( ಆಯುಷ್ ಮತ್ತು ಪಶು ವೈದ್ಯಕೀಯ ಆಸ್ಪತ್ರೆಗಳು ಕಾರ್ಯನಿರ್ವಹಿಸುವುದು ( ಕಂಟೈನ್ ಮೆಂಟ್ ವಲಯದ ಹೊರಗೆ)
*ಎಲ್ಲ ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
*ಕ್ಷೀರ ಸಂಸ್ಕರಣಾ ಕೇಂದ್ರಗಳಿಗೆ ಸಾರಿಗೆ ಮತ್ತು ಪೂರೈಕೆ ಒಳಗೊಂಡಂತೆ ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಸ್ಕರಣೆ ವಿತರಣೆ ಮತ್ತು ಮಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ

ವಾಣಿಜ್ಯ ಮತ್ತು ಖಾಸಗಿ ಸಂಸ್ಥೆ ಮುಚ್ಚಿರತಕ್ಕದ್ದು

ವಿನಾಯಿತಿ

*ಆಹಾರ ,ಹಾಗೂ ಹಣ್ಣು ತರಕಾರಿಗೆ ಖರೀದಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಅವಕಾಶ
ಮಾಧ್ಯಮ ಸಂಸ್ಥೆ , ಬ್ಯಾಂಕ್ , ವಿಮೆ ಕಚೇರಿ ಎಲ್ಲಾ ಆಹಾರ ಸಂಸ್ಕರಣೆ ಮತ್ತು ಕೈಗಾರಿಕೆ ವಿನಾಯಿತಿ
ಇ – ಕಾಮರ್ಸ್ ಮೂಲಕ ಆಹಾರ, ಔಷಧಿ, ವೈದ್ಯಕೀಯ ಸರಬರಾಜಿಗೆ ಅವಕಾಶ

ಎಲ್ಲಾ ಬಗೆಯ ಸರಕು ಸಾಗಣೆಯ ಗಳ ಅನಿರ್ಬಂಧಿತ ಚಲನೆ

*ಈಗಾಗಲೇ ನಿಗದಿಯಾಗಿರುವ ವಿಮಾನ – ರೈಲು ಪ್ರಯಾಣಕ್ಕೆ ಪ್ರಯಾಣಿಕರಿಗೆ ಅವಕಾಶ

*ಶಾಲೆ , ಕೊಚಿಂಗ್ ಶಾಪಿಂಗ್ ಮಾಲ್ ಹೊಟೇಲ್ , ಧಾರ್ಮಿಕ, ಸಾಮಾಜಿಕ ಸಮಾರಂಭಕ್ಕೆ ನಿಷೇಧ, ಎಲ್ಲಾ ಧಾರ್ಮಿಕ ಸ್ಥಳಗಳನ್ನು ಮುಚ್ಚಬೇಕು

*ತುರ್ತು ಸಂದರ್ಭದಲ್ಲಿ ಮತ್ತು ವೈದ್ಯಕೀಯ ತುರ್ತು ಸೇವೆಗಳ ಪ್ರಯಾಣಕ್ಕೆ ಮಾತ್ರ ಅವಕಾಶ


ಒಂದು ವೇಳೆ ಕೊವೀಡ್ ನಿರ್ವಹಣೆಯ ಲಾಕ್ ಡೌನ್ ಕ್ರಮಗಳನ್ನು ಉಲ್ಲಂಘಿಸಿದರೆ, ಯಾವುದೇ ವ್ಯಕ್ತಿಯ ವಿರುದ್ದ ವಿಪತ್ತು ನಿರ್ವಹಣೆಯ ಕಾಯ್ದೆ , ಹಾಗೂ ಭಾರತೀಯ ದಂಡ ಸಂಹಿತೆ 188 ಅಡಿಯಲ್ಲಿ ಕಾನೂನು ಕ್ರಮ ಜರಗಿಸುವ ಎಚ್ಚರಿಕೆಯನ್ನು ಜಿಲ್ಲಾಧಿಕಾರಿಗಳು ನೀಡಿದ್ದಾರೆ. 

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×