ಮಂಗಳೂರು : ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಒಟ್ಟು 6 ಮಂದಿ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರ್ಝುಕ್, ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಅಪಾಝ್, ಪ್ರಜನ್ ಶೆಟ್ಟಿ, ಸ್ವಸ್ತಿಕ್ ಹಾಗೂ ಗುರುಕಿರಣ್ ಮೇಲೆ ಎಫ್‌ಐಆರ್ ದಾಖಲಾಗಿದೆ.
ತರಗತಿಯಲ್ಲಿ ಸಾವರ್ಕರ್ ಫೋಟೊ ಅಳವಡಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮಧ್ಯಾಹ್ನ ಊಟದ ವೇಳೆ ಎರಡು ವಿದ್ಯಾರ್ಥಿ ತಂಡದ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ಇದರಲ್ಲಿ ಕೆಲ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಇನ್ನು ಇದೇ ಘಟನೆಗೆ ಸಂಬಂಧಿಸಿದಂತೆ ಸಂಜೆ ಸಮಾನ ಮನಸ್ಕ ಸಂಘಟನೆಯ ವಿದ್ಯಾರ್ಥಿಗಳು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿ ಗೇಟು ಬಳಿ ಪ್ರತಿಭಟನೆ ನಡೆಸಿದ್ದಾರೆ.
Follow us on Social media