ಮಂಗಳೂರು : ನಗರದ ಪಂಪ್‌ವೆಲ್ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲ್ ಎಸೆದಿರುವ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.
ಶನಿವಾರ ಮುಂಜಾನೆ ಪಂಪ್‌ವೆಲ್‌ನ ಮಸ್ಜಿದುತ್ತಖ್ವಾ ಮಸೀದಿ ಮೇಲೆ ಬಾಟಲ್ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ಕೋದಂಡರಾಮ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಹಿಂದೆ ಪಾಂಡೇಶ್ವರದಲ್ಲಿರುವ ಮೌಲಾನಾ ಅಬುಲ್ ಕಲಾಂ ಆಝಾದ್ ಭವನಕ್ಕೆ ಕಲ್ಲೆಸೆದು ಹಾನಿ ಮಾಡಲಾಗಿತ್ತು.
Follow us on Social media