ಮಂಗಳೂರು: ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮದ ಮೃಗಾಲಯದೊಳಕ್ಕೆ ಭಾರಿ ಪ್ರಮಾಣದಲ್ಲಿ ನೆರೆ ನೀರು ನುಗ್ಗಿದೆ. ಇದರಿಂದಾಗಿ ಸದ್ಯ ಪ್ರವಾಸಿಗರಿಗೆ ಪ್ರವೇಶಾವಕಾಶ ನಿರ್ಬಂಧಿಸಲಾಗಿದೆ ಎಂದು ಜೈವಿಕ ಉದ್ಯಾನವನದ ನಿರ್ದೇಶಕ ಎಚ್ ಜಯಪ್ರಕಾಶ್ ಭಂಡಾರಿ ಹೇಳಿದ್ದಾರೆ.
ಪಿಲಿಕುಳ ಜೈವಿಕ ಉದ್ಯಾನಕ್ಕೆ ನೀರು ನುಗ್ಗಿದ್ದು, ಇಲ್ಲಿಗೆ ತೆರಳುವ ರಸ್ತೆಯೂ ಜಲಾವೃತವಾಗಿದೆ. ಮತ್ತೊಂದೆಡೆ ಉದ್ಯಾನದ ಒಳಭಾಗದಲ್ಲೂ ನೀರು ನುಗ್ಗಿ ಸಂಕಷ್ಟ ಎದುರಾಗಿದೆ.
ಇದರಿಂದಾಗಿ ಪಿಲಿಕುಳದ ವೀಕ್ಷಣೆಗೆ ಪ್ರವಾಸಿಗರಿಗೆ ಹೋಗಲಾಗುತ್ತಿಲ್ಲ. ಕಡವೆಗಳು ಇರುವ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಉದ್ಯಾನದ ಅಲ್ಲಲ್ಲಿ ನೀರು ನುಗ್ಗಿ ಪ್ರಾಣಿಗಳ ವಾಸ್ತವ್ಯಕ್ಕೂ ಕಷ್ಟವಾಗಿದೆ.ಮಳೆಗಾಲದಲ್ಲಿ ಸಾಧಾರಣವಾಗಿ ನೀರು ಬರುತ್ತದೆಯಾದರೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಇದೇ ಮೊದಲ ಬಾರಿಗೆ ನೀರು ಒಳನುಗ್ಗಿದೆ. ಸದ್ಯ ಪ್ರವಾಸಿಗರಿಗೆ ಪಿಲಿಕುಳ ಮೃಗಾಲಯಕ್ಕೆ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ ಎಂದು ಭಂಡಾರಿ ಹೇಳಿದ್ದಾರೆ.
Follow us on Social media