ಮಂಗಳೂರು : ಭಾನುವಾರ ಇಲ್ಲಿನ ಬಂಗ್ಲಗುಡ್ಡೆಯಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಮಕ್ಕಳನ್ನು ಸಫ್ವಾನ್ (16), ಸಹಾಲ (10) ಎಂದು ತಿಳಿದುಬಂದಿದೆ.
ಗಂಟೆಗಳ ಪ್ರಯತ್ನದ ನಂತರ, ಪೊಲೀಸರ ಸಹಾಯದಿಂದ ಸ್ಥಳೀಯರು ಮಕ್ಕಳನ್ನು ಹೊರಗೆ ತರಲು ಸಾಧ್ಯವಾಯಿತ್ತಾದರೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು, ಸುತ್ತಮುತ್ತಲಿನ ಹಲವಾರು ಮನೆಗಳು ಅಪಾಯದಲ್ಲಿದೆ ಎಂದು ಹೇಳಲಾಗುತ್ತದೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಸರ್ಕಾರದಿಂದ ಹೊಸ ಮನೆಗಳನ್ನು ನಿರ್ಮಿಸಲಾಗುವುದು ಎಂದು ಸಚಿವ ಪೂಜಾರಿ ಕುಟುಂಬಗಳಿಗೆ ಭರವಸೆ ನೀಡಿದರು.
ಸುತ್ತಮುತ್ತಲಿನ 14 ಮನೆಗಳಲ್ಲಿ ವಾಸಿಸುವ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ.
Follow us on Social media