ಮಂಗಳೂರು : ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರ ವಿಶ್ವಾಸಗಳಿಸಿ, ನಂತರ ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರಗೈದು 1.5ಕೋಟಿ ರೂ. ವಂಚನೆಗೈದಿರುವ ಬಗ್ಗೆ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.
ಮೂಲತಃ ವಿಟ್ಲ ಬೈರಿಕಟ್ಟೆಯ ನಿವಾಸಿ ಫಯಾಝ್ (30) ಬಂಧಿತ ಆರೋಪಿಯಾಗಿದ್ದು, ಸಂತ್ರಸ್ತ ಮಹಿಳೆಯ ಕುಟುಂಬ 2012ರಲ್ಲಿ ಸುರತ್ಕಲ್‌ನಲ್ಲಿದ್ದ ವೇಳೆ ಇವರಿಬ್ಬರಿಗೆ ಪರಿಚಯವಾಗಿದೆ. ಬಳಿಕ ಈ ಪರಿಚಯ ಆತ್ಮೀಯತೆಗೆ ತಿರುಗಿದೆ. ಮಹಿಳೆಯ ಗಂಡ ಉದ್ಯಮಿಯಾಗಿದ್ದು, ಆರ್ಥಿಕವಾಗಿ ಸ್ಥಿತಿವಂತರಾಗಿದ್ದರು.
ಹೀಗಾಗಿ ಆರೋಪಿ ಮಹಿಳೆಯನ್ನು ವಿಶ್ವಾಸದಿಂದ ಬಲೆಗೆ ಬೀಳಿಸಿಕೊಂಡು, ಆಕೆಯ ಜತೆ ಸಲುಗೆಯಿಂದ ವರ್ತಿಸಲು ಆರಂಭಿಸಿದ್ದಾನೆ. ಕಳೆದ 4 ವರ್ಷದ ಹಿಂದೆ ಮಹಿಳೆಯ ಕುಟುಂಬ ಸುರತ್ಕಲ್‌ನಿಂದ ನಗರದ ಅಪಾರ್ಟ್‌ಮೆಂಟ್ ಒಂದರಲ್ಲಿ ಬಂದು ವಾಸ್ತವ್ಯ ಹೂಡಿದ್ದು, ಇದು ಆರೋಪಿಗೆ ಮತ್ತಷ್ಟು ಅನುಕೂಲವಾಗಿದ್ದು ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಕೋಟ್ಯಾಂತರ ರೂಪಾಯಿ ಪಡೆದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ
ಮಹಿಳೆಯ ನಗರ ಪೊಲೀಸ್ ಕಮಿಷನರ್ ದೂರು ನೀಡಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೂಡಲೇ ಕಾರ್ಯಾಚರಣೆ ನಡೆಸಿದ ಮಹಿಳಾ ಠಾಣಾ ಇನ್‌ಸ್ಪೆಕ್ಟರ್ ಲೋಕೇಶ್ ನೇತೃತ್ವದ ತಂಡ ಮಂಗಳವಾರ ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Follow us on Social media