ಮಂಗಳೂರು : ಮಳಲಿ ಮಸೀದಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಶುಕ್ರವಾರಕ್ಕೆ(ನಾಳೆಗೆ) ಮೂರನೇ ಸಿವಿಲ್ ನ್ಯಾಯಾಲಯ ಮುಂದೂಡಿದೆ.
ಇಂದು ವಾದ ಮಂಡಿಸಿದ ವಿಶ್ವ ಹಿಂದೂ ಪರಿಷತ್ ಪರ ವಕೀಲ ವಕೀಲ ಚಿದಾನಂದ ಕೆದಿಲಾಯ, ಮಳಲಿ ಮಸೀದಿಯನ್ನು ವಕ್ಫ್ ಆಸ್ತಿ ಎಂದು ಮಸೀದಿಯವರು ಹೇಳಿದರೆ ನಾವು ಒಪ್ಪುವುದಿಲ್ಲ. ನಮ್ಮ ಅರ್ಜಿದಾರರು ಅದೊಂದು ಐತಿಹಾಸಿಕ ಸ್ಮಾರಕ ಅಥವಾ ದೇವಸ್ಥಾನ ಅಂತ ಹೇಳಿದ್ದಾರೆ. ಹೀಗಾಗಿ ಅದರ ಸಂರಕ್ಷಣೆ ಮಾಡುವಂತೆ ಅರ್ಜಿಯಲ್ಲಿ ಕೇಳಿದ್ದಾರೆ. ಅದು ಐತಿಹಾಸಿಕ ಸ್ಮಾರಕವೋ ಮಸೀದಿಯೋ ಅನ್ನೋದನ್ನ ವಕ್ಫ್ ಟ್ರಿಬ್ಯೂನಲ್ ನಿರ್ಧರಿಸಲು ಆಗಲ್ಲ ಹೀಗಾಗಿ ಅದನ್ನ ಸಿವಿಲ್ ಕೋರ್ಟ್ ತಕ್ಷಣ ನಿರ್ಧರಿಸಬೇಕು ಎಂದಿದ್ದಾರೆ.ಇನ್ನು ಆ ಜಾಗದ ಸರ್ವೆಗೆ ಆದೇಶ ಮಾಡಿದರೆ ಅಲ್ಲಿನ ಸ್ಮಾರಕ ಏನು ಅನ್ನೋದು ಗೊತ್ತಾಗುತ್ತೆ. ಹೀಗಾಗಿ ವಕ್ಫ್ ಟ್ರಿಬ್ಯೂನಲ್ ವ್ಯಾಪ್ತಿಗೆ ಈ ಅರ್ಜಿ ಬರಲ್ಲ. 1991ರ ಪೂಜಾ ಸ್ಥಳ ಕಾಯ್ದೆಯಡಿಯೂ ಅರ್ಜಿ ವಜಾ ಮಾಡಲು ಆಗಲ್ಲ. ಪೂಜಾ ಸ್ಥಳ ಕಾಯಿದೆಯಲ್ಲೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಹೇಳಲಾಗಿದೆ.
ಯಾವುದೇ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಉಲ್ಲೇಖ ಇದೆ. ಹೀಗಿರುವಾಗ ನಮ್ಮ ಅರ್ಜಿದಾರರ ವಾದದಂತೆ ಅಲ್ಲಿರುವ ಸ್ಮಾರಕ ಏನು ಅಂತ ಗೊತ್ತಾಗಬೇಕು. ಅದು ಸರ್ವೇ ಮೂಲಕ ಗೊತ್ತಾದರೆ ಅದನ್ನ ಸಂರಕ್ಷಣೆ ಮಾಡಲು ಸಾಧ್ಯ. ಈಗ ಇರುವ ತಡೆಯಾಜ್ಞೆ ತೆರವು ಮಾಡಿದ್ರೆ ಅಲ್ಲಿ ಮಸೀದಿ ನಿರ್ಮಾಣ ಆಗುತ್ತೆ ಇದರಿಂದ ಐತಿಹಾಸಿಕ ಸ್ಮಾರಕವೊಂದರ ಸಂರಕ್ಷಣೆ ಅಸಾಧ್ಯ ಎಂದರು.ಚಿದಾನಂದ ಕೆದಿಲಾಯ ಸುಧೀರ್ಘ ವಾದ ಮಂಡನೆ ಮಾಡಿದ್ದು, ವಾದ ಆಲಿಸಿದ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
Follow us on Social media