ಮಂಗಳೂರು : ಫಲ್ಗುಣಿ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಮೂಡುಶೆಡ್ಡೆಯ ಪ್ರಭಾಕರ(22) ಆತ್ಮಹತ್ಯೆಗೆ ಮಾಡಿಕೊಂಡ ಯುವಕ.
ಈತ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಸಿಸಿ ಕೆಮರಾ ಹಾಗೂ ಮತ್ತಿತರ ಇಲೆಕ್ಟ್ರಾನಿಕ್ ಉಪಕರಣಗಳನ್ನು ರಿಪೇರಿ ಮಾಡುತ್ತಿದ್ದ ಈತ, ಗುರುವಾರ ಸಂಜೆ ದಿಢೀರನೆ ನದಿ ದಡಕ್ಕೆ ತೆರಳಿ ಬಳಿಕ ನದಿಗೆ ಹಾರಿದ್ದಾನೆ ಎಂದು ತಿಳಿದುಬಂದಿದೆ.ಈ ಸಂದರ್ಭದಲ್ಲಿ ಸಮೀಪದಲ್ಲಿದ್ದ ಕೆಲವರು ಆತನನ್ನು ಗಮನಿಸಿದ್ದಾರೆ. ಕೂಡಲೇ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅಷ್ಟರಲ್ಲೇ ಆತ ಸಾವನ್ನಪ್ಪಿದ್ದಾನೆ.ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media