ಮಂಗಳೂರು : ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ದ.ಕ. ಜಿಲ್ಲೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಸಂಪೂರ್ಣವಾಗಿ ಸಾರ್ವಜನಿಕರ ಓಡಾಟ ನಿರ್ಬಂದಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಕರಣಗಳು ದಾಖಲಾಗಬಾರದೆನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.ದ.ಕ. ಜಿಲ್ಲೆಯಲ್ಲಿ ಜನರ ಹಿತದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಜನತೆ ಸಹಕಾರ ನೀಡಬೇಕೆಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ. ಪ್ರತಿಯೊಬ್ಬರೂ ಮನೆಯೊಳಗೆ ಕೂತು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
Follow us on Social media