ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಹೊಸದಾಗಿ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗೂ ಪಡಿತರ ಹಂಚಿಕೆಯಾಗಿದೆ.
ಅರ್ಜಿದಾರರು ತಮ್ಮ ಮನೆಯ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ ಸಾಮಗ್ರಿ ಪಡೆಯಬಹುದಾಗಿದೆ.
ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ಹಾಗೂ ಎಪಿಎಲ್ ಕಾರ್ಡ್ ಅರ್ಜಿದಾರರಿಗೆ ಪ್ರತೀ ಕೆ.ಜಿ.ಗೆ ರೂ. 15ರಂತೆ 10 ಕೆಜಿ ಅಕ್ಕಿ ನೀಡಲಾಗುವುದು. ಅರ್ಜಿದಾರರು ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಆಧಾರ್ ಕಾರ್ಡ್ ನ್ಯಾಯಬೆಲೆ ಅಂಗಡಿಗೆ ಹಾಜರುಪಡಿಸಿ ಪಡಿತರ ಪಡೆಯಬಹುದಾಗಿದೆ ಎಂದು ಆಹಾರ ಜಂಟೀ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Follow us on Social media