ಮಂಗಳೂರು : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೊವೀಡ್ – 19 ಪರಿಸ್ಥಿತಿಯ ಕುರಿತಂತೆ ಸೋಮವಾರ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರ ಸಹಿತವಾಗಿ ಹಲವು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಸಾರ್ವಜನಿಕ ಹಾಗೂ ಆರೋಗ್ಯವಲಯದಲ್ಲಿ ಆಂತಕ ಮೂಡಿಸಿದ್ದು , ಲಾಕ್ ಡೌನ್ ಗೆ ಒತ್ತಡ ಹೆಚ್ಚುತ್ತಿದೆ ಎಂದು ಇದೇ ವೇಳೆ ಸಭೆಯಲ್ಲಿ ಹಾಜರಿದ್ದವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಜಿಲ್ಲೆಯ ಪರಿಸ್ಥಿತಿಯ ವರದಿ ಪಡೆದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು , ” ಲಾಕ್‌ಡೌನ್‌ಗೆ ವೈಯಕ್ತಿಕವಾಗಿ ನನ್ನ ವಿರೋಧವಿದ್ದು , ಲಾಕ್‌ಡೌನ್ ನಿಂದ ಎಲ್ಲಾ ಸರಿಯಾಗುತ್ತೆ ಎಂಬ ಭ್ರಮೆ ಬೇಡ” ಎಂದು ಹೇಳಿದ್ದಾರೆ .
ಹೀಗಾಗಿ ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ಕುರಿತ ಮುಂದಿನ ನಿರ್ಧಾರದ ಬಗ್ಗೆ ಜಿಲ್ಲಾಡಳಿತ ನಡೆ ಏನು ಎಂಬುವುದು ಇನ್ನಷ್ಟೇ ತಿಳಿದುಬರಬೇಕಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ನಡೆದ ವಿಡೀಯೋ ಕಾನ್ಪರೆನ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ , ಸಚಿವ ಕೋಟಾ, ಸಂಸದ ನಳಿನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸೆಲ್ವಮಣಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ಮುಂತಾದವರು ಹಾಜರಿದ್ದರು.
Follow us on Social media