ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಒಟ್ಟು 106 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಬುಧವಾರ ಮುಟ್ಟುಗೋಲು ಹಾಕಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಿಗು ತಪಾಸಣೆ ನಡೆಸಲಾಗುತ್ತಿದ್ದು, ನಿಯಮ ಉಲ್ಲಂಘನೆ ಮಾಡಿದ 88 ದ್ವಿಚಕ್ರ ವಾಹನ, 11 ರಿಕ್ಷಾ, ಹಾಗೂ ೭ ಚತುಶ್ಚಕ್ರ ವಾಹನಸೇರಿದಂತೆ ಒಟ್ಟು 106 ವಾಹನಗಳ ಮೇಲೆ ಕೇಸು ದಾಖಲಿಸಲಾಗಿದೆ. ಇದರಲ್ಲಿ ಸಂಚಾರ ಪೊಲೀಸರು 57 ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರು 49 ವಾಹನಗಳನ್ನು ವಶಪಡಿಸಿದ್ದಾರೆ.
Follow us on Social media