ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದ ಹೆಸರು ಅಧಿಕೃತವಾಗಿ ಬದಲಾವಣೆ ಕಂಡಿದೆ.
ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ.
ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಬರೆಯಲಾಗಿದೆ.
ಆದರೆ, ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ ‘ಮ್ಯಾಂಗಲೋರ್’ ಎಂದೇ ಇದೆ.
ಆದರೆ, ಮಂಗಳೂರು ನಗರದಲ್ಲಿಯೂ ‘ಮಂಗಳೂರು’ ಪದ ಬಳಕೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹಾಗೂ ದೇಶ-ವಿದೇಶದ ಪಾಲುದಾರರ ನಡುವಿನ ವ್ಯವಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಸರು ಬದಲಾವಣೆ ಮಾಡಲಾಗಿದೆ.
ಡಿ.1ರಿಂದ ಹೊಸ ಹೆಸರು ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ
Follow us on Social media