ಮಂಗಳೂರು : ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ನಿರ್ವಹಿಸುತ್ತಿರುವ ದೇಶದ ನಾಲ್ಕು ವಿಮಾನ ನಿಲ್ದಾಣಗಳು ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳೆಂಬ ಪ್ರಶಸ್ತಿಗೆ ಪಾತ್ರವಾಗಿವೆ.
ಉಳಿದಂತೆ, ಚಂಡೀಗಢ, ತಿರುವನಂತಪುರ ಹಾಗೂ ಲಕ್ನೋ ವಿಮಾನ ನಿಲ್ದಾಣಗಳು ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳೆಂಬ ಹೆಗ್ಗಳಿಕೆಗೆ ಪಾತ್ರವಾಗಿವೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ, ಪ್ರಯಾಣಿಕರಿಗೆ ನೀಡಿದ ಉತ್ಕೃಷ್ಟ ಸೇವೆ, ವಿಶ್ವ ಗುಣಮಟ್ಟದ ಸೌಲಭ್ಯಗಳಿಗಾಗಿ ಈ ಪುರಸ್ಕಾರ ನೀಡಿದೆ.
ಈ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಸುವ ಬಳಕೆದಾರರು ವ್ಯಕ್ತಪಡಿಸಿದ ತೃಪ್ತಿ ಹಾಗೂ ಅಭಿಪ್ರಾಯಗಳನ್ನು ಆಧರಿಸಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ ಈ ಪ್ರಶಸ್ತಿ ನೀಡಿದೆ.