ಮಂಗಳೂರು: ಹಿಜಾಬ್ ವಿವಾದ ಹಾಗೂ ಸಾವರ್ಕರ್ ಫೋಟೋ ಅಳವಡಿಸಿ ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿ ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು, 3 ಜನ ಗಾಯಗೊಂಡಿದ್ದಾರೆ.
ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಮನ್ಸೂರ್, ಮಹಮ್ಮದ್ ರಿಪಾಝ್ ಗಾಯಗೊಂಡವರು. ಕೆಲ ದಿನಗಳ ಹಿಂದೆ ಸಾವರ್ಕರ್ ಫೋಟೊಗೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಹೊಡೆದಾಟದ ದೃಶ್ಯಾವಳಿ ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಕ್ಯಾಂಪಸ್‌ಗೆ ಭೇಟಿ ನೀಡಿ ಸಿಸಿಟಿವಿ ಪರಿಶೀಲಿಸಿ, ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿಗೆ ನಿರೀಕ್ಷಿಸುತ್ತಿದ್ದೇವೆ.
Follow us on Social media