ಮಂಗಳೂರು : ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 17 ಕೊರೊನಾ ವೈರಸ್ ಪ್ರಕರಣಗಳು ಹಾಗೂ ಉಡುಪಿಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 16 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ವರದಿಯಾದ 17 ಕೊರೊನಾ ವೈರಸ್ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕು ಪ್ರರಕಣಗಳ ಸಂಖ್ಯೆ 34,303ಕ್ಕೆ ಏರಿವೆ. ಈ ಪೈಕಿ 237 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 554582 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 520279 ಮಾದರಿಗಳು ನೆಗೆಟಿವ್ ಆಗಿದೆ. ಶನಿವಾರ 20 ಜನರು ಗುಣಮುಖರಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ 33,326 ಕ್ಕೆ ಏರಿದೆ. ಈವರೆಗೆ ಒಟ್ಟು 740 ಸಾವುಗಳು ಸಂಭವಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33,274 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿ ಮಾಡಲಾಗಿದ್ದು 34,39,290 ರೂ.ಗಳ ದಂಡವನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.
ಉಡುಪಿ
ಶನಿವಾರ ದೃಢಪಟ್ಟ 16 ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 23,514ಕ್ಕೆ ಏರಿದೆ. ಈ ಪೈಕಿ 47 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 3,56,668 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,33,154 ಮಾದರಿಗಳು ನೆಗೆಟಿವ್ ಆಗಿದೆ.
ಶನಿವಾರ 15 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 23,278 ಕ್ಕೆ ಏರಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.
Follow us on Social media