ಮಂಗಳೂರು: ನನಗೆ ಕೊರೊನಾ ಪಾಸಿಟಿವ್, ನನಗಾಗಿ ಪ್ರಾರ್ಥಿಸಿ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಟ್ವೀಟ್ ಮಾಡಿಕೊಂಡಿದ್ದಾರೆ.
ತಪಾಸಣೆಯ ವೇಳೆ ನನಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ನಿಮ್ಮ ಆಶೀರ್ವಾದಗಳೊಂದಿಗೆ ನಾನು ಶೀಘ್ರ ಚೇತರಿಸಿಕೊಳ್ಳುತ್ತಿದ್ದೇನೆ. ನಾನು ಕೆಲವು ದಿನಗಳವರೆಗೆ ಚಿಕಿತ್ಸೆ ಪಡೆಯಲಿದ್ದೇನೆ. ದಯವಿಟ್ಟು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ, ಹೊರಗೆ ಹೋಗುವಾಗ ಮಾಸ್ಕ್ ಧರಿಸಿ, ಆಗಾಗ ಕೈತೊಳೆದುಕೊಳ್ಳುತ್ತಿರಿ, ನಿಮ್ಮ ಹಾಗೂ ನಿಮ್ಮವರ ಬಗ್ಗೆ ಕಾಳಜಿ ವಹಿಸಿ’ ಎಂದು ಭರತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.
Follow us on Social media