ಮಂಗಳೂರು : ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನೊಬ್ಬನಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಿಪಳ್ಳ ಆರನೇ ಬ್ಲಾಕ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ.
ಹಲ್ಲೆಗೊಳಗಾದ ಬಾಲಕನನ್ನು ಕಾಟಿಪಳ್ಳ ನಿವಾಸಿ ಅಬ್ದುಲ್ ಉಮರ್ ಎಂಬವರ ಪುತ್ರ, ಆರನೇ ಬ್ಲಾಕ್ ತೌಯಿಬಾ ಮಸೀದಿಯ 6ನೇ ತರಗತಿಯ ವಿದ್ಯಾರ್ಥಿ ಶಯಾನ್ ಎಂದು ತಿಳಿದು ಬಂದಿದೆ.
ಬಾಲಕ ಶಯಾನ್ ಮದರಸ ತರಗತಿ ಮುಗಿಸಿ ಚಕ್ರವರ್ತಿ ಮೈದಾನವಾಗಿ ಮನೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬೈಕ್ ನಲ್ಲೇ ಬಾಲಕನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಬಾಲಕ ಧರಿಸಿದ್ದ ಮದರಸದ ಸಮವಸ್ತ್ರ ಹರಿದ ಕಾರಣ ದುಷ್ಕರ್ಮಿಗಳ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಯಿತು ಎನ್ನಲಾಗಿದೆ.
ಈ ಸಂಬಂಧ ಶಯಾನ್ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಬಾಲಕನ ಮೇಲೆ ಹಲ್ಲೆ ನಡೆಸಿ ಕೋಮುಗಲಭೆಗೆ ಯತ್ನಿಸುತ್ತಿರುವ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಕಾನೂನು ರೀತಿಯ ಕ್ರಮಕ್ಕೆ ಮುಂದಾಗಬೇಕೆಂದು ಸ್ಥಳೀಯರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
Follow us on Social media