Breaking News

ಮಂಗಳೂರು : 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.ದ.ಕ.ದಲ್ಲಿ ತಹಶೀಲ್ದಾರ್‌ಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ.

ಉಳಿದ ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಸೂಚಿಸಲಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×