Breaking News

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ, ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ

ಶ್ರೀನಗರ: ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ.

ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ  ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ಕೂಡ ತಕ್ಕ ಪ್ರತ್ಯುತ್ತರ ನೀಡುತ್ತಿದ್ದು, ಗುಂಡಿನ ದಾಳಿ ನಡೆಸಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×