ಮಂಗಳೂರು: ಮಂಗಳೂರಿನಾದ್ಯಂತ ಶುಕ್ರವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆ ಆರಂಭವಾಗಿದೆ.
ಗುರುವಾರ ಸಂಜೆ ವೇಳೆ ಏಕಾಏಕಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಅಪಾರ ನಷ್ಟ ಸಂಭವಿಸಿತ್ತು. ಮಳೆಯ ಆರ್ಭಟದ ನಡುವೆ ರೈಲು ಹಳಿ ದಾಟುತ್ತಿದ್ದ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದರು. ಇದೀಗ ಇಂದು ಬೆಳಗ್ಗಿನಿಂದಲೇ ಮಳೆ ಆರಂಭವಾಗಿ ಜನಸಂಚಾರ ಅಸ್ತವ್ಯಸ್ತಗೊಂಡರು. ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ.