ನವದೆಹಲಿ : ಇದೇ 20 ರಂದು ನಿರ್ಭಯಾ ಆರೋಪಿಗಳಿಗೆ ಮರಣದಂಡನೆ ವಿಧಿಸಿ ದೆಹಲಿ ಹೈಕೋರ್ಟ್ ಆದೇಶಿ ಹೊರಡಿಸಿದ ಬೆನ್ನಲ್ಲೇ ಪ್ರಕರಣದ ಆರೋಪಿ ಮುಕೇಶ್ ಮತ್ತೊಮ್ಮೆ ಸುಪ್ರೀಂಕೊರ್ಟ್ ಮೆಟ್ಟಿಲೇರಿದ್ದಾನೆ.
ನಿರ್ಭಯಾ ಪ್ರಕರಣದ ನಾಲ್ವರು ಅರಾಧಿಗಳಿಗೆ ಪಟಿಯಾಲ ಹೌಸ್ ನ್ಯಾಯಾಲಯ ನೀಡಿದ ಹೊಸ ಮರಣದಂಡನೆ ಆದೇಶ ಹೊರಬಿದ್ದ ಬಳಿಕ, ಗಲ್ಲುಶಿಕ್ಷೆಯನ್ನು ಜೀವಾವಧಿಗೆ ಬದಲಿಸುವಂತೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ. ಜತೆಗೆ ಕ್ಷಮಾದಾನ ಕೋರಿ ಮತ್ತೊಮ್ಮೆ ರಾಷ್ಟ್ರಪತಿಯವರಿಗೆ ಮನವಿ ಮಾಡಿದ್ದಾನೆ.
ದೆಹಲಿಯಲ್ಲಿ 2012 ಡಿಸೆಂಬರ್ 16ರಂದು ನಡೆದ ವೈದ್ಯಕೀಯೇತರ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತ, ವಿನಯ್ ಕುಮಾರ್ ಶರ್ಮಾ(26), ಅಕ್ಷಯ್ ಸಿಂಗ್ (31) ಅವರನ್ಹು ಇದೇ 20ರಂದು ಬೆಳಗ್ಗೆ 5.30ಕ್ಕೆ ಗಲ್ಲಿಗೇರಿಸುವಂತೆ ಪಟಿಯಾಲಾ ಹೌಸ್ ನ್ಯಾಯಾಲಯ ಆದೇಶಿಸಿದೆ.