ಭೋಪಾಲ್: ಮಧ್ಯಪ್ರದೇಶದಲ್ಲಿ ಈಗಾಗಲೇ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಗೆ ಭಾನುವಾರ ಮತ್ತೊಂದು ಹೊಡೆತ ಬಿದ್ದಿದೆ.
ಬುಂದೇಲ್‌ಖಂಡ್ ಪ್ರದೇಶದ ಮಲ್ಹರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಶಾಸಕ ಪ್ರದ್ಯುಮ್ನ ಸಿಂಗ್ ಲೋಧಿ ಅವರು ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ ನಂತರ ಶಾಸಕ ಲೋಧಿ ಅವರು ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರ ನೇತೃತ್ವದಲ್ಲಿ ಲೋಧಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ನನ್ನ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ. ಬಿಜೆಪಿಯಿಂದ ಮಾತ್ರ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ಸೇರಿದ ಬಳಿಕ ಲೋಧಿ ಹೇಳಿದ್ದಾರೆ.
Follow us on Social media