ಮುಂಬೈ: ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.
ಸದ್ಯದ ಟ್ರೆಂಡ್ ಪ್ರಕಾರ, 206 ಕ್ಷೇತ್ರಗಳಲ್ಲಿ ಟಿಎಂಸಿ, ಬಿಜೆಪಿ 83 ಕ್ಷೇತ್ರಗಳಲ್ಲಿ ಮುಂದಿದ್ದು, ಟಿಎಂಸಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುವುದು ನಿಶ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿಯನ್ನು ಅಭಿನಂದಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿ ಶಿವಸೇನಾ ಮುಖಂಡ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ.
ಬಂಗಾಳದ ಹೆಣ್ಣು ಹುಲಿಗೆ ಅಭಿನಂದನೆಗಳು, ಒ ದೀದಿ..ದೀ ಒ ದೀದಿ ಎಂದು ಹೊಗಳಿರುವ ಸಂಜಯ್ ರಾವತ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿ ಟ್ವೀಟ್ ಮಾಡಿದ್ದಾರೆ.
Follow us on Social media