ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದ ಅತೀ ಹೆಚ್ಚು ಪ್ರಮಾಣದಲ್ಲಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಮತ್ತೆ 3,427 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಇಂದೂ ಕೂಡ ಮಹಾರಾಷ್ಟ್ರದಲ್ಲಿ 3,427 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,04,568ಕ್ಕೇರಿದೆ. ಅಂತೆಯೇ ಇಂದೂ ಕೂಡ ಮಹಾರಾಷ್ಟ್ರದಲ್ಲಿ 113 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 3,830ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 1,550 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 49,346ಕ್ಕೆ ಏರಿಕೆಯಾಗಿದೆ. 51,392 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಮಹಾರಾಷ್ಟ್ರದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ.47.2 ರಷ್ಟಿದ್ದು, ಮರಣ ಪ್ರಮಾಣ ಶೇ.3.7ರಷ್ಟಿದೆ.
Follow us on Social media