Breaking News

ಮಹಾ ಮೇಲ್ಮನೆ ಚುನಾವಣೆಗೆ ಅಭ್ಯರ್ಥಿ ಹಿಂಪಡೆಯಲು ಕಾಂಗ್ರೆಸ್ ಗೆ ಒತ್ತಡ: ಸಿಎಂ ಉದ್ಧವ್ ಠಾಕ್ರೆ ಅವಿರೋಧ ಆಯ್ಕೆ ಸಾಧ್ಯತೆ

ಮುಂಬೈ: ಮಹಾರಾಷ್ಟ್ರ ಮೇಲ್ಮನೆ ಚುನಾವಣೆ ನಿಗದಿಯಾಗಿದ್ದು, ಮಹಾ ವಿಕಾಸ್‌ ಅಘಾಡಿಯ ಮಿತ್ರ ಪಕ್ಷ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದನ್ನು ಶಿವಸೇನೆ ವಿರೋಧಿಸಿದ ಪರಿಣಾಮ ಈಗ ಕೈ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. 

ಈಗ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆದಿಯಾಗಿ ಮೇಲ್ಮನೆ ಚುನಾವಣೆಗೆ 9 ಅಭ್ಯರ್ಥಿಗಳು ಕಣದಲ್ಲಿದ್ದು, ಉದ್ಧವ್ ಠಾಕ್ರೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. 

ಸ್ಪರ್ಧೆಯೇ ಇಲ್ಲದೇ ಮಹಾರಾಷ್ಟ್ರ ವಿಕಾಸ್ ಅಘಾಡಿಯ ಭಾಗವಾಗಿರುವ ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷ 5 ಸ್ಥಾನಗಳನ್ನು ಗಳಿಸಲಿದೆ.  ಬಿಜೆಪಿ 4 ಸ್ಥಾನಗಳನ್ನು ಗಳಿಸಲಿದೆ. 

ಮೇಲ್ಮನೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಮೇ.09 ರಂದು ಏಕಾಏಕಿಯಾಗಿ 2 ನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಎರಡನೇ ಅಭ್ಯರ್ಥಿಯನ್ನು ಹಿಂಪಡೆದಿದೆ.
 

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×