ಕುಂದಾಪುರ: ಮಾಜಿ ಶಾಸಕಿ, , ಎಂಎಲ್‌ಸಿ ಮತ್ತು ಹಿರಿಯ ಕಾಂಗ್ರೆಸ್ ನಾಯಕಿಯಾದ ವಿನ್ನಿಫ್ರೆಡ್ ಫರ್ನಾಂಡಿಸ್ (90)ಏಪ್ರಿಲ್ 28 ರ ಮಂಗಳವಾರ ಮಧ್ಯಾಹ್ನ ತಮ್ಮ ಚರ್ಚ್ ರಸ್ತೆ ನಿವಾಸದಲ್ಲಿ ನಿಧನರಾದರು.
ಪ್ರಜಾ ಸೋಷಿಯಲಿಸ್ಟ್ ಪಕ್ಷದ ಮೂಲಕ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಅವರು ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಅವರು ಎರಡು ಬಾರಿ ಕುಂದಾಪುರ ಕ್ಷೇತ್ರದ ಶಾಸಕರಾಗಿದ್ದರು. ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸಹ ಸೇವೆ ಸಲ್ಲಿಸಿದ್ದರು.
ಅವರು ಪ್ರಾಮಾಣಿಕ ಹಾಗೂ ಪರಿಶುದ್ದ ವ್ಯಕ್ತಿತ್ವಕ್ಕೆ ಹೆಸರಾಗಿದ್ದು ಕುಂದಾಪುರದಲ್ಲಿ ಮೊದಲ ಮಹಿಳಾ ಪೊಲೀಸ್ ಠಾಣೆ ಪ್ರಾರಂಭಿಸಿದ ಖ್ಯಾತಿ ಹೊಂದಿದ್ದಾರೆ. ಆಕೆಗೆ ಮೂವರು ಪುತ್ರಿಯರು ಮತ್ತು ಮೂವರು ಗಂಡು ಮಕ್ಕಳಿದ್ದಾರೆ.
Follow us on Social media