ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೊನಾ ವೈರಸ್ ಮತ್ತೊಂದು ಬಲಿ ಪಡೆದಿದ್ದು ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಸೋಮವಾರ ಒಂದು ದಿನದಲ್ಲಿ ಮೂವರು ಕೊರೊನಾಗೆ ಬಲಿಯಾಗಿ ಸಾವಿನ ಸಂಖ್ಯೆ 25 ಕ್ಕೆ ಏರಿಕೆಯಾಗಿತ್ತು. ಇದೀಗ ಮಂಗಳವಾರ ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು ಈವರೆಗೆ ಜಿಲ್ಲೆಯಲ್ಲಿ 26 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
Follow us on Social media